ದೆಹಲಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ.
ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ತಕ್ಷಣವೇ ಕೋರ್ಟ್ಗೆ ಸರೆಂಡರ್ ಆಗ್ಬೇಕಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿ, ಕೋರ್ಟಿಗೆ ಸರಂಡರ್ ಆಗದಿದ್ದರೆ ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕೆಂದು ಆದೇಶ ಹೊರಡಿಸಿದೆ. ಯಾವಾಗ ಸರೆಂಡ್ ಆಗ್ಬೇಕು ಅನ್ನೋದು ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿರುತ್ತೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ
