5 ಉಗ್ರರ ಬಂಧನ: ಎನ್​ಐಎಗೆ ನೀಡುವಂತೆ ಬೊಮ್ಮಾಯಿ ಆಗ್ರಾಹ

5 ಉಗ್ರರ ಬಂಧನ: ಎನ್​ಐಎಗೆ ನೀಡುವಂತೆ ಬೊಮ್ಮಾಯಿ ಆಗ್ರಾಹ

ಬೆಂಗಳೂರು: ಇಂದು ರಾಜ್ಯದ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಪೊಲೀಸರು ಐದು ಜನ ಉಗ್ರರನ್ನು ಬಂಧಿಸಿದ್ದಾರೆ. ಇನ್ನೂ ಇದರ ಬಗ್ಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ಕೂಡಲೇ ಎನ್​ಐಎ ತನಿಖೆಗೆ ವಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅವರು ಕ್ಲಬ್​​ಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಹಫ್ತಾ ವಸೂಲಿ ತೀವ್ರವಾಗುತ್ತಿದೆ. ಬೆಂಗಳೂರು ಉಗ್ರರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಕ್ರಿಮಿನಲ್ ಚಟುವಟಿಕೆಗೆ ಕುಮ್ಮಕ್ಕು ಕೊಡುವಂತಹ ಕೆಲಸ ಆಗುತ್ತಿದೆ ಎಂದರು.

ಶಂಕಿತ ಭಯೋತ್ಪಾದಕರಿಗೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಫೋಟ ಮಾಡುವ ಹುನ್ನಾರ ಇತ್ತು. ಈ ಸರ್ಕಾರವನ್ನು ಮಧ್ಯವರ್ತಿಗಳು ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದು ಆಗ್ರಹಿಸಿದರು.

 

Related