ದಸರ ಗಜಪಡೆ ಆಗಮನ

  • In State
  • September 16, 2021
  • 409 Views
ದಸರ ಗಜಪಡೆ ಆಗಮನ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಸಹಕಾರ ಸಚಿವರು, ಮೈಸೂರು, ಚಾಮರಾಜನಗರ ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ ಶುಭ ಲಗ್ನದಲ್ಲಿ ಜಿಲ್ಲಾ ಉಸ್ತುವಾರಿ ಗಜಪಡೆಗೆ ಸಚಿವ ಎಸ್.ಟಿ. ಸೋಮಶೇಖರ್ ಗುರುವಾರ ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಿದರು.
ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದಲ್ಲಿ ಎಂಟು ಆನೆಗಳು ಅರಮನೆ ಪ್ರವೇಶ ಮಾಡಿದವು. ಮಂಗಳ ವಾದ್ಯ, ಪೂರ್ಣ ಕುಂಭ ಸ್ವಾಗತದ ಮೂಲಕ ಆನೆಗಳನ್ನು ಬರಮಾಡಿಕೊಳ್ಳಲಾಯಿತು. ಅ.7ರಂದು ದಸರಾ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಅ.15 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ. ಸೆ.23 ರವರೆಗೆ ಅಧಿವೇಶನ ಇರುವುದರಿಂದ ದಸರಾ ಉದ್ಘಾಟನೆ ಯಾರಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ ಎಂದರು. ಅಧಿವೇಶನ ಮುಗಿದ ಬಳಿಕ ಪ್ರಮುಖರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ದಸರಾ ಉದ್ಘಾಟನೆಗೆ ಇನ್ನೂ ಯಾರ ಹೆಸರು ಅಂತಿಮಗೊಳಿಸಿಲ್ಲ ಎಂದು ಸಚಿವರು ತಿಳಿಸಿದರು.
ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ನಿಗಮ ಮಂಡಳಿಗಳ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಎಂ. ಶಿವಣ್ಣ, ಎನ್.ವಿ. ಫಣೀಶ್, ಎಲ್.ಆರ್. ಮಹದೇವಸ್ವಾಮಿ, ಎಂ.ಆರ್. ಕೃಷ್ಣಪ್ಪಗೌಡ, ಉಪಮೇಯರ್ ಅನ್ವರ್ ಬೇಗ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಎಸ್‌ಪಿ ಆರ್.ಚೇತನ್, ಜಿಪಂ ಸಿಇಒ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಡಿಸಿಎಫ್ ಕರಿಕಾಳನ್, ಎಡಿಸಿ ಡಾ. ಮಂಜುನಾಥಸ್ವಾಮಿ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಮುಖಂಡರು ಅಧಿಕಾರಿಗಳು ಉಪಸ್ಥಿತ್ತರಿದ್ದರು.

Related