ಕೊನೆಗೂ ರಾಗಿಣಿಗೆ ಜಾಮೀನು ಮಂಜೂರು

ಕೊನೆಗೂ ರಾಗಿಣಿಗೆ ಜಾಮೀನು ಮಂಜೂರು

ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸೆ.04 ರಂದು ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರನ್ನು ಬಂಧಿಸಿದ್ದರು. ಈ ವೇಳೆ ಸೆ.14 ರಂದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿತ್ತು. ಇದನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟಿನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದರು.

ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಒಟ್ಟಾರೆ ರಾಗಿಣಿ ಅವರು 140 ದಿನ ಜೈಲಿನಲ್ಲಿ ಕಳೆದಿದ್ದರು.

Related