ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ

ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ

ಚಿತ್ರದುರ್ಗ : ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಖಾಸಗಿ ಕ್ಲಿನಿಕ್ ಮೇಲೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿ, ಸಾವಿರಾರು ರೂಪಾಯಿ ಮೌಲ್ಯದ ಔಷಧಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಹಿರಿಯೂರು ತಹಶೀಲ್ದಾರ ಜಿ.ಎಚ್ ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್‌ಒ ಡಾ.ವೆಂಕಟೇಶ್ ನೇತೃತ್ವದ ಜಂಟಿ ತಂಡ ದಾಳಿ ನಡೆಸಿ, ಆರೋಪಿಗೆ ಬಂಧಿಸಿದ್ದಾರೆ.

ಸರ್ಕಾರದಿಂದ ಬರುವ ಔಷಧಿ, ಇಂಜೆಕ್ಷನ್, ಮಾತ್ರೆಗಳು, ಸಿರೆಂಜ್‌ಗಳು ಹಾಗೂ ಸರ್ಕಾರದ ಔಷಧಿಗಳನ್ನು ದುರುಪಯೋಗಪಡಿಸಿಕೊಂಡು ಜವನಗೊಂಡನಹಳ್ಳಿಯ ಮನೆಯಲ್ಲಿ ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಎನ್ನಲಾಗಿದೆ.

ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ದುರುಪಯೋಗಪಡಿಸಿಕೊಂಡು ಮಾರಾಟ ಮಾಡಿ, ಹಣಗಳಿಸುತ್ತಿದ್ದನು ಎಂದು ತಿಳಿದು ಬಂದಿದೆ. ಈ ಮೂಲಕ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದ ಆರೋಪಿಯ ವಿರುದ್ಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related