ಬೆಂಗಳೂರು: ಇತ್ತೀಚಿಗಷ್ಟೇ ಕನ್ನಡ ಚಿತ್ರರಂಗದ ಮೋಹಕ ತಾರೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾಡ್ ಕಾಮೆಂಟ್ಸ್ ಹಾಕಿದ್ದನ್ನು ಖಂಡಿಸಿ ನಟಿ ರಮ್ಯಾ ಅವರು ಕಾಮೆಂಟ್ಸ್ ಹಾಕಿದವರ ವಿರುದ್ಧ ದೂರು ದಾಖಲಿಸಿದ್ದರು.
ರಮ್ಯಾ ಅವರಿಗೆ ಅಸಭ್ಯ ಕಾಮೆಂಟ್ ಹಾಕಿರುವ ಬೆನ್ನೆಲೆ ಮತ್ತೆ ಇದೀಗ ನಟ ದರ್ಶನ್ ಅವರ ಪತ್ನಿ, ವಿಜಯಲಕ್ಷ್ಮಿಯವರಿಗೂ ಕೂಡ ಸೋಶಿಯಲ್ ಮೀಡಿಯಾ ಗಳಲ್ಲಿ ಅಸಭ್ಯ ಕಾಮೆಂಟ್ಸ್ ಗಳನ್ನು ಹಾಕಿದ್ದಾರೆ ಎದ್ದು ತಿಳಿದು ಬಂದಿದೆ.
ಇನ್ನು ವಿಜಯಲಕ್ಷ್ಮಿಯವರು ಅಸಭ್ಯವಾಗಿ ಕಾಮೆಂಟ್ ಹಾಕಿರುವವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.
ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸುದ್ದಿಗಾರರ ಜತೆ ಮಾತನಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡಲಾಗಿದೆ. ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಕಿಡಿಗೇಡಿಗಳು ಹೇಗೆ ಅಸಭ್ಯ ಸಂದೇಶಗಳನ್ನು ರವಾನಿಸಿದ್ದರೋ ಅದೇ ರೀತಿ ವಿಜಯಲಕ್ಷ್ಮಿ ಅವರಿಗೂ ಅಸಭ್ಯವಾಗಿ, ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡೆವಿಲ್ ಸಿನಿಮಾ; ದಾಸನ ಸ್ಟೈಲಿಗೆ ಅಭಿಮಾನಿಗಳು ಫುಲ್ ಫಿದಾ!
ಮಾಜಿ ಸಂಸದೆ ರಮ್ಯಾ, ವಿಜಯಲಕ್ಷ್ಮಿ ದರ್ಶನ್ ಅಂತ ಅಲ್ಲ, ಯಾವುದೇ ಹೆಣ್ಣು ಮಕ್ಕಳ ಬಗ್ಗೆ ಅಸಭ್ಯವಾಗಿ ಕಮೆಂಟ್ ಮಾಡಿದರೆ, ಅವಹೇಳನ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ತಿಳಿಸಿದರು.
