ಮಡಿವಾಳ ಸಮುದಾಯಕ್ಕೆ ಸಹಾಯಧನ ಸೌಲಭ್ಯ 

  • In State
  • July 15, 2020
  • 1179 Views
ಮಡಿವಾಳ ಸಮುದಾಯಕ್ಕೆ ಸಹಾಯಧನ ಸೌಲಭ್ಯ 

ಬಳ್ಳಾರಿ:ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ವತಿಯಿಂದ ೨೦೨೦-೨೧ನೇ ಸಾಲಿನಲ್ಲಿ ಮಡಿವಾಳ ಸಮಾಜಕ್ಕೆ ಸೇರಿದ ಅಭ್ಯರ್ಥಿಗಳ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಸಾಲ ಯೋಜನೆಯಡಿಯಲ್ಲಿ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿವಾಳ ಸಮಾಜಕ್ಕೆ ಸೇರಿದ ಅಗಸ, ಚಕಲ, ದೋಭಿ, ಮಡಿವಾಳ, ಮಾನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು ವರ್ಗಕ್ಕೆ ಸೇರಿರಬೇಕು. ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ-ಸಹಾಯ ಗುಂಪುಗಳ ಮೂಲಕ ಮತ್ತು ಸಹಾಯಧನ, ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಮತ್ತು ಸಹಾಯ ಧನದ ಸೌಲಭ್ಯ ಪಡೆಯಬಹುದಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಉಚಿತವಾಗಿ ಪಡೆದು ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ್ ಮತ್ತು ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿಯನ್ನು dbcdckarnataka.gov.in ಮೂಲಕ ಎಲ್ಲಾ ದಾಖಲಾತಿಗಳನ್ನು ಆಗಸ್ಟ್ ೦೩ ರೊಳಗೆ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ  ದೂ.ಸಂ. 08392-267038.

Related