ಬಿಸಿಲಿನ ಬೇಗೆಗೆ ಬೆಂಗಳೂರು ಈಗ ʼಬೆಂದಕಾಳೂರುʼ

ಬಿಸಿಲಿನ ಬೇಗೆಗೆ ಬೆಂಗಳೂರು ಈಗ ʼಬೆಂದಕಾಳೂರುʼ

ಬೆಂಗಳೂರು: ಇತ್ತೀಚಿನ ಕೆಲವು ದಿನಗಳಿಂದ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಬಿಸಿಲಿನ ತಾಪಮಾನವೇರುತ್ತಿದ್ದು, ಈ ಬಿಸಿಲಿಗೆ ಜನ ಗಂಗಾಲಾಗಿದ್ದಾರೆ.

ಈಗಾಗಲೇ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಇನ್ನು ಮೂರು ದಿನಗಳವರೆಗೆ ಉರಿಬಿಸಿಲಿನ ಜೊತೆಗೆ ಬಿಸಿ ಗಾಳಿಯು ಕೂಡ ಬೀಸಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಈ ಬೆಳವಣಿಗೆ ನಡುವೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರು ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ.

ಬೆಂಗಳೂರಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿರುವ ಸಾಧ್ಯತೆ ಇದೆ. ತಾಪಮಾನ ಏರಿಕೆಯಲ್ಲಿ ಆಯಾ ಸ್ಥಳಗಳಲ್ಲಿ ಸ್ಥಳೀಯ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ವಾಣಿಜ್ಯ ಸಿಲಿಂಡರ್‌ ಬಳಕೆದಾರರಿಗೆ ಸಿಕ್ತು ಗುಡ್ ನ್ಯೂಸ್..!

ಇನ್ನು ಈ ನಡುವೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 5 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

 

Related