Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬ್ಯಾಂಕ್ ದರೋಡೆ; ತಪ್ಪಿಸಿಕೊಂಡ ಆರೋಪಿಗಳು
  • Crime
  • Politics
  • State

ಬ್ಯಾಂಕ್ ದರೋಡೆ; ತಪ್ಪಿಸಿಕೊಂಡ ಆರೋಪಿಗಳು

admin January 17, 2025
Spread the love

ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ  ಮುಖ್ಯಮಂತ್ರಿಗ ಸಿದ್ದರಾಮಯ್ಯ ಅವರು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು. ಇದನ್ನೂ ಓದಿ: ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

About the Author

admin

Administrator

Visit Website View All Posts

Spread the love

Post navigation

Previous: ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
Next: ಬ್ಯಾಂಕ್ ನ ನೂತನ ಅಧ್ಯಕ್ಷರ ಆಯ್ಕೆ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.