ಬಸನಗೌಡ ಪಾಟೀಲ್ ಯತ್ನಾಳ್ ಮಹಾ ಸುಳ್ಳುಗಾರ: ಸಿಎಂ

ಬಸನಗೌಡ ಪಾಟೀಲ್ ಯತ್ನಾಳ್ ಮಹಾ ಸುಳ್ಳುಗಾರ: ಸಿಎಂ

ಬೆಳಗಾವಿ: ರಾಜ ರಾಜಕೀಯದಲ್ಲಿ ಕಳೆದ ಎರಡು ದಿನಗಳಿಂದ ಧರ್ಮ ದಂಗಲ್ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಗುರುಗಳ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನೆ ಬಂಡವಾಳವನ್ನು ಮಾಡಿಕೊಂಡಿರುವ ಬಿಜೆಪಿ ನಾಯಕ ಬಸನಗೌಡ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಇಲ್ಲದ ಸಲದ ಆರೋಪಗಳನ್ನು ಮಾಡುತ್ತಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಸ್ಲಿಂ ಗುರು ಪೀರಾ ಜೊತೆ ನನಗೆ ಹಲವು ವರ್ಷದ ನಂಟಿದೆ. ಬಸನಗೌಡ ಪಾಟೀಲ್ ಯತ್ನಾಳ್ ಮಹಾ ಸುಳ್ಳುಗಾರ. ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಡಿ. 4ರಂದು ಹುಬ್ಬಳ್ಳಿ ತಾಲೂಕಿನ ಪಾಳೆ ಗ್ರಾಮದ ಹಜರತ್ ಸೈಯ್ಯದ ಮೊಹಮ್ಮದ ಬಾದಶಾ ಪೀರಾ (ಭಾಷಾಪೀರಾ) ದರ್ಗಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳ ಜೊತೆ ಐಸಿಸ್‌ ಸಂಘಟನೆಯೊಂದಿಗೆ ನಂಟು ಇದ್ದವರು ಭಾಗಿಯಾಗಿದ್ದರು ಎಂದು ಯತ್ನಾಳ ಆರೋಪ ಮಾಡಿದ್ದರು.

ಆರಂಭದಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ವೇಳೆ ಈ ಹೇಳಿಕೆ ನೀಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇದು ಹುಡುಗಾಟಿಕೆ ಅಲ್ಲ, ಗಂಭೀರ ವಿಚಾರವನ್ನೇ ಹೇಳುತ್ತಿದ್ದೇನೆ ಎಂದಿದ್ದರು. ಆದರೆ ಈ ಆರೋಪ ಸುಳ್ಳು ಎಂದು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಂತೆ, ಕೆಲ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟೇ ಅಲ್ಲ ಶೀಘ್ರದಲ್ಲೇ ಮತ್ತಷ್ಟು ದಾಖಲೆ ಬಹಿರಂಗಪಡಿಸುವುದಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

 

 

Related