ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿಗೆ ಆಗ್ರಹ

ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿಗೆ ಆಗ್ರಹ

ವಿಜಯಪುರ : ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಬಸವಣ್ಣನವರ ಜನ್ಮಸ್ಥಳ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ಈ ತಿಂಗಳಲ್ಲಿ ನಿಯೋಗ ಕರೆದುಕೊಂಡು ಹೋಗಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

ಜಗತ್ತಿಗೆ ಕಾಯಕ ಸಂದೇಶ ಮತ್ತು ಮಹಿಳಾ ಸ್ವಾತಂತ್ರ‍್ಯವನ್ನು ಕರುಣಿಸಿದ ವಿಶ್ವಗುರು ಬಸವಣ್ಮನವರಿಗೆ ಜನ್ಮ ನೀಡಿದ ಪುಣ್ಯಭೂಮಿ, ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ಆಗಲೇಬೇಕು. ಈ ಹಿಂದೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಹದಾಯಿ ಅಂತಿಮ ತೀರ್ಪು ಬರುವ ಮುನ್ನವೇ ಮಲಪ್ರಭಾ ನದಿ ಒತ್ತುವರಿ ತೆರವುಗೊಳಿಸಿ; ಅಶೋಕ್ ಚಂದರಗಿ ಆಗ್ರಹಿಸಿದರು.

ಪಟ್ಟಣದ ಈಗ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿದೆ. ಈಗಾಗಾಲೇ ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಬಸವಣ್ಣನವರ ಮನೆಯನ್ನು ಸ್ವಾಧೀನಪಡಿಸಿಕೊಂಡು ಬಸವ ಸ್ಮಾರಕ ನಿರ್ಮಿಸಲಾಗಿದೆ. ಆದರೆ ಬಸವ ಭಕ್ತರ ಬೇಡಿಕೆಯಂತೆ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಬೇಕು ಎಂದು ಅವರು ಆಗ್ರಹಿಸಿದರು.

Related