ಬಸ್ಸಿನಲ್ಲೇ ಮಗುವಿನ ಜನನ

  • In State
  • February 19, 2020
  • 476 Views
ಬಸ್ಸಿನಲ್ಲೇ ಮಗುವಿನ ಜನನ

ಹಾಸನ, ಫೆ. 19 : ಒಂಬತ್ತು ತಿಂಗಳ ತುಂಬು ಗರ್ಭಿಣಿಯೊಬ್ಬರು ಕೆಎಸ್ಆರ್ಟಿಸಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಷಹೀನಾ ಬಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದವರು.
ಹುಬ್ಬಳ್ಳಿ ಮೂಲದ ಷಹೀನಾರನ್ನ ಮಡಿಕೇರಿಯ ಹುಡುಗನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮಂಗಳವಾರ ಷಹೀನಾ ಪೋಷಕರ ಜೊತೆ ಬಸ್ಸಿನಲ್ಲಿ ಬರುತ್ತಿದ್ದಾಗ ಹಾಸನದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಸ್ವಲ್ಪ ಸಮಯದ ನಂತರ ಷಹೀನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Related