ಡಿಸಿಎಂಗೆ ಕ್ಷಮೆಯಾಚಿಸಿದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್​

ಡಿಸಿಎಂಗೆ ಕ್ಷಮೆಯಾಚಿಸಿದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್​

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಕಮಿಷನ್ ಆರೋಪ ಕೇಳಿ ಬಂದಿದ್ದು, ಇದರ ಬೆನ್ನಲ್ಲೇ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯ ಹೇಮಂತ್ ಕುಮಾರ್ ಇದೀಗ ಯೂಟರ್ನ್ ಹೊಡೆದಿದ್ದಾರೆ.

ಬಾಕಿ ಬಿಲ್ ಪಾವತಿಗಾಗಿ ಡಿಕೆ ಶಿವಕುಮಾರ್ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯ ಹೇಮಂತ್​ ಕುಮಾರ್ ಇದೀಗ ಯೂಟರ್ನ್​ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೇಮಂತ್, ಅಜ್ಜಯ್ಯನ ಮೇಲೆ ಆಣೆ ಮಾಡಲಿ ಎನ್ನುವ ಹೇಳಿಕೆ ಹಿಂಪಡೆಯುತ್ತೇನೆ.

ನಾನು ಹೇಳಿಕೆ ನೀಡಿದ್ದು ತಪ್ಪು, ಇದಕ್ಕೆ ಕ್ಷಮೆ ಕೋರುತ್ತೇನೆ. ನಾನು ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ. SIT ತನಿಖೆ ಬಗ್ಗೆ ಮಾಹಿತಿ ಬಂತು. ಹಾಗಾಗಿ ಭಾವುಕನಾಗಿ ಹೇಳಿದೆ. ಆ ಹೇಳಿಕೆಯನ್ನು ವಿರೋಧ ಪಕ್ಷದ ನಾಯಕರು ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನನ್ನ ಹೇಳಿಕೆಯನ್ನ ಇಲ್ಲಿಗೆ ಬಿಟ್ಟುಬಿಡಿ ಮನವಿ ಮಾಡಿದರು.

 

Related