ಬಿಬಿಎಂಪಿ ನಿಯಂತ್ರಣ ಕೊಠಡಿ ಪರಿಶೀಲನೆ

ಬಿಬಿಎಂಪಿ ನಿಯಂತ್ರಣ ಕೊಠಡಿ ಪರಿಶೀಲನೆ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ ಅನೆಕ್ಸ್ ಕಟ್ಟಡದ 6ನೇ ಮಹಡಿಯಲ್ಲಿರುವ ನಿಯಂತ್ರಣ ಕೊಠಡಿ ಹಾಗೂ ICCC ಕೇಂದ್ರವನ್ನು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ಉಮಾಶಂಕರ್ ರವರು ಇಂದು ಜೂನ್‌ 05 ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಕೇಂದ್ರ ಕಛೇರಿಯಲ್ಲಿರುವ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಕಾರ್ಯವೈಖರಿಯನ್ನು ಪರಿಶೀಲಿಸಿದರು. ನಿಯಂತ್ರಣ ಕೊಠಡಿಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡುತ್ತಾ ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಲು ತಿಳಿಸಿದರು. ಇದನ್ನೂ ಓದಿ:ನಾನೇನಾದ್ರೂ ಕೊಲೆ ಮಾಡಿದ್ದೀನಾ? ತೆಲುಗು ನಟಿ ಹೇಮಾ ಕೂಗಾಟ..!

ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಪಾಲಿಕೆಯ ಸಹಾಯವಾಣಿ ಸಂಖ್ಯೆ 1533ಗೆ ನಾಗರೀಕರಿಂದ ದೂರುಗಳು ಬರಲಿದ್ದು, ಬಂದಂತಹ ಕರೆಗಳನ್ನು ನಿಯೋಜಿಸಲ್ಪಟ್ಟ ಸಿಬ್ಬಂದಿಗಳು ಸ್ವೀಕರಿಸಿ ಸಹಾಯ 2.0 ತಂತ್ರಾಂಶದಲ್ಲಿ ದೂರು ದಾಖಲಿಸಲಿದ್ದಾರೆ. ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರಿನ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಐಸಿಸಿಸಿ ಕೇಂದ್ರ ಪರಿಶೀಲನೆ

ಬೆಂಗಳೂರು ಸ್ಮಾರ್ಟ್ ಸಿಟಿ ಮೂಲಕ ಸ್ಥಾಪಿಸಿರುವ ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್(ಐಸಿಸಿಸಿ)ಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಐಸಿಸಿಸಿ ಹೇಗೆ ಕಾರ್ಯನಿರ್ವಹಿಸಲಿದೆ, ಯಾವ್ಯಾವುದನ್ನು ಮೇಲ್ವಿಚಾರಣೆ ಮಾಡಲಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.

ನಗರದಲ್ಲಿರುವ ರಾಜಕಾಲುವೆಗಳಲ್ಲಿ ಕೆ.ಎಸ್.ಎನ್.ಡಿ.ಎಂ.ಸಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ವತಿಯಿಂದ ನೀರಿನ ಮಟ್ಟವನ್ನು ಅಳೆಯುವ ಸೆನ್ಸಾರ್ ಗಳನ್ನು ಅಳವಡಿಸಲಾಗಿದ್ದು, ಅದನ್ನು ಐಸಿಸಿಸಿ ಕೇಂದ್ರದಿಂದ ಮೇಲ್ವಿಚಾರಣೆ ಮಾಡಲಾಗುತ್ತದೆ. ಅದು ಯಾವ ರೀತಿ ಕಾರ್ಯನಿರ್ವಹಿಸಲಿದೆ, ಇದರಿಂದಾಗುವ ಅನುಕೂಲ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ವೇಳೆ ವಿಪತ್ತು ನಿರ್ವಹಣೆ ವಿಭಾವದ ವಿಶೇಷ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related