ಸೇವೆಗೆ ಪ್ರಶಂಸೆಯೊಂದೇ ಬೇಡ; ಸೌಲಭ್ಯ ನೀಡಿ: ಆಶಾ ಕಾರ್ಯಕರ್ತೆಯರು

ಸೇವೆಗೆ ಪ್ರಶಂಸೆಯೊಂದೇ ಬೇಡ; ಸೌಲಭ್ಯ ನೀಡಿ: ಆಶಾ ಕಾರ್ಯಕರ್ತೆಯರು

ಬಳ್ಳಾರಿ : ಜುಲೈ 10 ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ತಿಳಿಸಿದರು.

ಜೂನ್ 30 ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ. ಆದರೆ, ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ನಮ್ಮ ಸೇವೆಗೆ ಕೇವಲ ಪ್ರಶಂಸೆಯೊಂದೇ ಬೇಡ, ಅದರಿಂದ ನಮ್ಮ ಹೊಟ್ಟೆ ತುಂಬುವುದಿಲ್ಲ. ನಮ್ಮ ಮೇಲೆ ನಿಜವಾದ ಗೌರವ ಇದ್ದರೆ, ಅಗತ್ಯ ಸೌಲಭ್ಯಗಳನ್ನು ನೀಡಿ, ಸಾವಿರ ಗೌರವಧನ ಖಾತರಿಪಡಿಸಬೇಕು. ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

Related