ಬೆಂಗಳೂರು ನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ

ಬೆಂಗಳೂರು ನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ-2023 ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ 7 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ನಗರದ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಏಳು ಕ್ಷೇತ್ರದ ಮತ ಏಣಿಕೆ ಕಾರ್ಯ ನಡೆಸಲಾಯಿತು.

150-ಯಲಹಂಕ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿಯಾದ ಎಸ್. ಆರ್. ವಿಶ್ವನಾಥ್ ರವರು 1,38,565 ಮತಗಳನ್ನು ಗಳಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೇಶವ ರಾಜಣ್ಣ.ಬಿ ವಿರುದ್ಧ 62,228 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

152-ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಸ್ಪರ್ಧಿಸಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೃಷ್ಣ ಬೈರೇಗೌಡ ರವರು 1,59,781 ಮತಗಳನ್ನು ಗಳಿಸಿ  ಬಿಜೆಪಿ ಪಕ್ಷದ ತಮ್ಮೇಶ್ ಗೌಡ ರವರ ವಿರುದ್ಧ 38,250 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

153- ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿಯಾದ ಎಸ್.ಟಿ ಸೋಮಶೇಖರ್ ರವರು 1,68,485 ಮತಗಳನ್ನು ಗಳಿಸಿ ಜೆಡಿಎಸ್ ಪಕ್ಷದ  ಜವರಾಯಿ ಗೌಡ ರವರ ವಿರುದ್ಧ 14,928  ಮತಗಳ ಅಂತರದಿಂದ ಜಯಗಳಿಸಿದ್ದಾರೆ.

155-ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿಯಾದ ಸಿ.ಮುನಿರಾಜು ರವರು 90,901 ಮತಗಳನ್ನು ಗಳಿಸಿ ಜೆಡಿಎಸ್ ಪಕ್ಷದ ಎಸ್. ಮಂಜುನಾಥ್ ರವರ ವಿರುದ್ಧ 9,235 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

174- ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಸ್ಪರ್ಧಿಸಿದ  ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಮಂಜುಳಾ ಅರವಿಂದ ಲಿಂಬಾವಳಿ ರವರು 1,81,731 ಮತಗಳನ್ನು ಗಳಿಸಿ  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹೆಚ್. ನಾಗೇಶ್ ರವರ ವಿರುದ್ಧ 44,501 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

176-ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿಯಾದ ಎಂ.ಕೃಷ್ಣಪ್ಪ ರವರು 1,95,564 ಮತಗಳನ್ನು ಗಳಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್.ಕೆ ರಮೇಶ್ ವಿರುದ್ಧ 49,312 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

177- ಆನೇಕಲ್ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಸ್ಪರ್ಧಿಸಿದ  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ. ಶಿವಣ್ಣ ರವರು 1,34,797 ಮತಗಳನ್ನು ಗಳಿಸಿ ಬಿಜೆಪಿ ಅಭ್ಯರ್ಥಿಯಾದ ಹುಳ್ಳಲ್ಲಿ ಸಿ. ಶ್ರೀನಿವಾಸ್ ರವರ ವಿರುದ್ಧ 31,325 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

Related