ಬೆಂಗಳೂರು: ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ

ಬೆಂಗಳೂರು: ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಾಳೆಯಿಂದ (ಡಿ.09 ರಿಂದ ಶುಕ್ರವಾರ) ಕಡಲೆಕಾಯಿ ಪರಿಷೆ ನಡೆಯಲಿದ್ದು,ಈ ಬಾರಿ ನಗರದಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿದ್ದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರಿನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದ್ದು, ಇಲ್ಲಿ ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕೆಂದು ಹೇಳಿದರು. ಇನ್ನು ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಕರೆ ನೀಡಲಾಗಿದೆ ಎಂದರು.

ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷೆಯಲ್ಲಿ ಪ್ಲಾಸ್ಟಿಕ್​ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಕರೆ ನೀಡಲಾಗಿದೆ.

 

Related