ಆದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರು ಸಿದ್ಧ: ತುಷಾರ್ ಗಿರಿನಾಥ್

ಆದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರು ಸಿದ್ಧ: ತುಷಾರ್ ಗಿರಿನಾಥ್

ಬೆಂಗಳೂರು: ಈ ಬಾರಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆದ್ದೂರಿಯಾಗಿ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹೇಳಿದರು.

ಅವರು ಇಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜನವರಿ 26 ರಂದು ಬೆಳಗ್ಗೆ 8.58 ಕ್ಕೆ ಮಾನ್ಯ ರಾಜ್ಯಪಾಲರು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮಾನ್ಯ ರಾಜ್ಯಪಾಲರು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ   ಗಣರಾಜ್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ ಎಂದು ತಿಳಿಸಿದರು.

ಪಂಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೋಳಗೊಂಡಂತೆ ಕವಾಯತು ಮತ್ತು ಬ್ಯಾಂಡ್ ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಮಂದಿ  ಭಾಗವಹಿಸಲಿದ್ದಾರೆ ಹಾಗೂ ಶಾಲಾ ಮಕ್ಕಳ ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಗಳಲ್ಲಿ ಸುಮಾರು 1500 ಮಕ್ಕಳು ಭಾಗವಹಿಸಲಿದ್ದಾರೆ ಎಂದರು.

ಗಣರಾಜ್ಯೋತ್ಸವ ದಿನಾಚರಣೆಯ  ಕಾರ್ಯಕ್ರಮದ  ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸಾರ್ವಜನಿಕರಿಗೆ  ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ಆಕಸ್ಕಿಕ ವಿಪತ್ತು ಸಂಭವಿದಲ್ಲಿ ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದರು.

ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ ದಯಾನಂದ ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆಗಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ 09 ಡಿಸಿಪಿ, 16-ಎಸಿಪಿ, 46-ಪಿಐ, 109-ಪಿ.ಎಸ್.ಐ/ಮಪಿಎಸ್ ಐ, 77-ಎ.ಎಸ್.ಐ,  594-ಹೆಚ್.ಸಿ/ಪಿಸಿ, 87-ಮಹಿಳಾ ಸಿಬ್ಬಂದಿಗಳೊಂದಿಗೆ 184-ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು 56 ಜನ ಕ್ಯಾಮರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ.ದಯಾನಂದ. ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್  ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related