Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಗ್ರಹಗಳನ್ನು ಸ್ಥಾಪಿಸಿ ವಿಚಾರಗಳನ್ನು ಕೊಲ್ಲುವ ಅಪಾಯದ ಬಗ್ಗೆ ಎಚ್ಚರ: ಕೆ.ವಿ.ಪಿ
  • Politics
  • State

ವಿಗ್ರಹಗಳನ್ನು ಸ್ಥಾಪಿಸಿ ವಿಚಾರಗಳನ್ನು ಕೊಲ್ಲುವ ಅಪಾಯದ ಬಗ್ಗೆ ಎಚ್ಚರ: ಕೆ.ವಿ.ಪಿ

admin August 30, 2025 1 minute read
WhatsApp Image 2025-08-30 at 13.26.03
Spread the love

ಚಿತ್ರದುರ್ಗ: ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ವಿವರಿಸಿದರು.‌

ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಆಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಇವತ್ತಿನ‌ ಸುದ್ದಿ ಮಾಧ್ಯಮಗಳ ರಚನೆ ಮತ್ತು ಆಚರಣೆಯಲ್ಲಿ ಜಾತ್ಯತೀತತೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಎರಡು ತದ್ವಿರುದ್ದವಾದ ಬೆಳವಣಿಗೆಗಳು ಅತೀ ವೇಗವಾಗಿ ನಡೆಯುತ್ತಿವೆ. ಒಂದು ಅಂಬೇಡ್ಕರ್ ಅವರ ವಿಗ್ರಹಗಳನ್ನು ಅತೀ ಹೆಚ್ಚು ನಿರ್ಮಿಸುತ್ತಲೇ ಅಂಬೇಡ್ಕರ್ ಅವರ ವಿಚಾರಗಳನ್ನು ಕೊಲ್ಲುವ ಪ್ರಕ್ರಿಯೆ ಕೂಡ ಹೆಚ್ಚು ವೇಗ ಪಡೆದುಕೊಂಡಿದೆ. ವಿಗ್ರಹಗಳನ್ನು ಸ್ಥಾಪಿಸಿ, ವಿಚಾರಗಳನ್ನು ಕೊಲ್ಲುವ ಈ ವಿದ್ಯಮಾನಕ್ಕೆ ಸುದ್ದಿ ಮಾಧ್ಯಮ ” ಮೂಕಸಾಕ್ಷಿ”ಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

 

About the Author

admin

Administrator

Visit Website View All Posts

Spread the love

Post navigation

Previous: ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
Next: ಕೆ ಎನ್ ರಾಜಣ್ಣ ಬಿಜೆಪಿ ಸೇರ್ಪಡೆ ಆಗ್ತಾರಾ?

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.