Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ
  • Bangalore
  • Front news
  • Politics
  • State

ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ

admin May 21, 2025 1 minute read
Spread the love

ಬೆಂಗಳೂರು: ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು (ಬುಧವಾರ ಮೇ 21) ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾನು ಮುಷ್ತಾಕ್ ಅವರು ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಮೌಲ್ಯವನ್ನು ಮತ್ತು ಜಾತ್ಯತೀತತೆಯನ್ನು ಬೆಸೆಯುವ ಕಾರ್ಯ ಮಾಡುತ್ತಲೇ ಬರುತ್ತಿದ್ದಾರೆ. ಇವರಿಗೆ ಬೂಕರ್ ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯ ಮತ್ತು ಕನ್ನಡತನದ ಹಿರಿಮೆಯನ್ನು ಹೆಚ್ಚಿಸಿದ್ದು ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡಬೇಕಾದ ಸಂದರ್ಭ ಇದಾಗಿದೆ ಎಂದರು. ಇದನ್ನೂ ಓದಿ: ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ

ವಿಶ್ವ ಮಾನವತೆಯ ಸದಾಶಯವನ್ನು ಎತ್ತಿ ಹಿಡಿಯುವ ಭಾನು ಮುಷ್ತಾಕ್ ಅವರ ಕತೆಗಳು ವಿಶ್ವದ ಎಲ್ಲಾ ಭಾಷೆಗಳಿಗೂ ಅನುವಾದಗೊಳ್ಳಬೇಕು ಎನ್ನುವುದು ನನ್ನ ಆಶಯ.

ಭಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕೃತೆಗಳು ನನಗೆ ಬಹಳ ಇಷ್ಟವಾದ ಸಂಕಲನ. ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ
Next: ದೇಶದಲ್ಲೇ ಆನೆ ಸಂಪತ್ತು ಹೆಚ್ಚು ಹೊಂದಿರುವ ರಾಜ್ಯ ನಮ್ಮದು: ಸಿಎಂ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.