ಕಾಂಗ್ರೆಸ್‌ಗೆ ಬಿಗ್ ರಿಲೀಫ್..!

ಕಾಂಗ್ರೆಸ್‌ಗೆ ಬಿಗ್ ರಿಲೀಫ್..!

ನವದೆಹಲಿ: ಲೋಕಸಭೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಸುಮಾರು 3500 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ  ಕಳೆದ ಕೆಲವು ದಿನಗಳ ಹಿಂದೆ ಆದೇಶವನ್ನು ಹೊರಡಿಸಿತ್ತು.

ಇನ್ನುನೋಟಿಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದರಿಂದ ಕಾಂಗ್ರೆಸ್ ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಆದಾಯ ತೆರಿಗೆ ಇಲಾಖೆ ಕಳುಹಿಸಿದ್ದ ನೋಟಿಸ್ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ, ಐಟಿ ಇಲಾಖೆಯನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಈ ವಿಷಯದ ಅಂತಿಮ ತೀರ್ಪಿನವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಮೆಹ್ತಾ ತಿಳಿಸಿದ್ದಾರೆ.

ವಿತ್ ಡ್ರಾ ಮಾಡಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿತ್ತು.

Related