ಬೆಂಗಳೂರು: ಹೈಕೋರ್ಟ್ ನಿಂದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಮನಗರದ ಕೇತಗಾನಹಳ್ಳಿಯ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಹೈಕೋರ್ಟ್ ಇಂದು (ಗುರುವಾರ ಜೂನ್ 19) ರಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.
ಅಕ್ರಮ ಭೂ ಒತ್ತುವರಿಗೆ ಆರೋಪ ಪ್ರಕರಣ ತನಿಖೆ ಮಾಡಲು ಜನವರಿ ತಿಂಗಳಲ್ಲಿ ಸರ್ಕಾರ ಎಸ್ಐಟಿ ರಚಿಸಿತ್ತು. ಹೀಗಾಗಿ ಎಸ್ಐಟಿ ರಚನೆ ಪ್ರಶ್ನಿಸಿ ಹೆಚ್ ಡಿ ಕುಮಾರಸ್ವಾಮಿ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್, ಎಸ್ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ಹೈನುಗಾರರ ಬದುಕು ಹಸನಾಗಿಸಲು ಪಣ: ಡಿಕೆ ಸುರೇಶ್
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು.
