ಕಾಂಗ್ರೆಸ್‍ಗೆ ಬಿಗ್ ಶಾಕ್

ಕಾಂಗ್ರೆಸ್‍ಗೆ ಬಿಗ್ ಶಾಕ್

ನವದೆಹಲಿ : ಕಾಂಗ್ರೆಸ್‌ಗೆ ಮತ್ತೊಂದು ಬಿಗ್‌ಶಾಕ್ ಎದುಉರಾಗಿದ್ದು, ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ವಿಜಯ ಶಾಂತಿ ಅವರು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ  ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ವಿಜಯಶಾಂತಿ ಅವರು ಬಿಜೆಪಿ ಸೇರ್ಪಡೆಯಾದರೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಉನ್ನತ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆ ದೆಹಲಿಗೆ ತೆರಳಲಿರುವ ವಿಜಯಶಾಂತಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಮೂಲಕ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

Related