ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಚಿಕ್ಕ ಮಕ್ಕಳಿಗೆ ಮತ್ತು ಶಾಲಾ ಮಕ್ಕಳಿಗೆ ಹುಟ್ಟು ಹಬ್ಬ ಆಚರಣೆ ಎಂದರೆ ಎಲ್ಲಿಲ್ಲದ ಸಂತೋಷ ಮತ್ತು ಸಡಗರ.

ಹೌದು, ಚಿಕ್ಕ ಮಕ್ಕಳು ಮತ್ತು ಶಾಲೆಗೆ ಹೋಗುವಂತ ಮಕ್ಕಳು ತಮ್ಮ ಹುಟ್ಟು ಹಬ್ಬವನ್ನು ಶಾಲೆಗಳಲ್ಲಿ ಆಚರಿಸಿಕೊಳ್ಳುತ್ತಿದ್ದರು ಆದರೆ ಈಗ ಕರ್ನಾಟಕದ ಶಾಲೆಗಳಲ್ಲಿ ಮಕ್ಕಳ ಹುಟ್ಟು ಹಬ್ಬವನ್ನು ಆಚರಣೆ ಮಾಡಬಾರದೆಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ

ರಾಜ್ಯಾದ್ಯಂತ ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬವನ್ನ ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಲಾಗಿದೆ ಎಂದು  ರಾಜ್ಯ ಸರ್ಕಾರ ಸುತ್ತೋಲೆ  ಹೊರಡಿಸಿದೆ.

ಗಣ್ಯ ವ್ಯಕ್ತಿಗಳು ಮತ್ತು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

 

 


Related