Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  •   ಬಿಜೆಪಿ, ದಳ ಯೂಟರ್ನ್ ಹೊಡೆಯೋದೇನು ಹೊಸದಲ್ಲ: ಡಿಕೆ.ಸುರೇಶ್
  • Bangalore
  • Front news
  • Politics
  • State

  ಬಿಜೆಪಿ, ದಳ ಯೂಟರ್ನ್ ಹೊಡೆಯೋದೇನು ಹೊಸದಲ್ಲ: ಡಿಕೆ.ಸುರೇಶ್

admin June 9, 2025 1 minute read
Spread the love

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತಕ್ಕೆ ಒಳಗಾಗಿ 11 ಜನ ಸಾವನ್ನುಪ್ಪಿರುವ ಘಟನೆಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ಜಟಾಪಟಿಯೇ ನಡೆಯುತ್ತಿದೆ.

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ ಎಂದು ಡಿ.ಕೆ.ಸುರೇಶ್ ಅವರು ಹೇಳಿದರು.

ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು. ಕ್ರೀಡಾ ಅಭಿಮಾನಿಗಳಿಗೆ ಅವಮಾನ ಮಾಡುತ್ತಿದ್ದೀರಿ, ನಿಮಗೆ ಮೆರವಣಿಗೆ ನಡೆಸಲು ಆಗುವುದಿಲ್ಲವೇ ಎಂದು ಕೇಳಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಇದೇ ಪ್ರವೃತ್ತಿ ಹೊಂದಿದ್ದಾರೆ. ಜನ ಅವರಿಗೆ ಬಹುಮತ ನೀಡಿಲ್ಲ. ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಆಗಿರುವ ಘೋರ ದುರಂತಗಳ ಪಟ್ಟಿ ನೀಡುತ್ತೇವೆ. ಬಿಜೆಪಿ ನಾಯುಕರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ..!

ಮುಂಬೈ ದಾಳಿಯಾದಾಗ ಈ ಘಟನೆ ನಂತರ ವಿಲಾಸ್ ರಾವ್ ದೇಶ್ಮುಖ್ ಅವರು ರಾಜಿನಾಮೆ ನೀಡಿದ್ದರು. ಇದನ್ನು ಕುಮಾರಸ್ವಾಮಿ ಅವರು ಮರೆತು ಹೋಗಿದ್ದಾರೆ. ಇವರಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೆನಪಿಸಿಕೊಳ್ಳದೆ ಊಟ, ನಿದ್ದೆ ಏನೂ ಆಗುವುದಿಲ್ಲ. ಅವರು ಮೊದಲು ಆರೋಗ್ಯದ ಬಗ್ಗೆ ಗಮನವಿಡಲಿ, ಈ ರಾಷ್ಟ್ರದ ಜನರ ಸೇವೆ ಮಾಡಲಿ ಎಂದು ಮನವಿ ಮಾಡುತ್ತೇನೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಬೆಂಗಳೂರು ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ..!
Next: ಸಿದ್ದರಾಮಯ್ಯನವರು ಆಡಳಿತದ ಮೇಲಿನ ನಿಯಂತ್ರಣ ಕಳೆದು ಕೊಂಡಿದ್ದಾರೆ: ಟಿ.ಎ. ಶರವಣ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.