ಬೆಂಗಳೂರು: ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರು ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಸದಾಶಿವನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿವರು ಇರುವುದೇ ಟೀಕೆ ಮಾಡಲು. ಬಿಜೆಪಿಗೆ ಬೇರೆ ಏನು ಕೆಲಸ ಇದೆ. ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದು ದೊಡ್ಡ ಮೊತ್ತದ ಯೋಜನೆ, ಇದರ ಗುಣಮಟ್ಟ ಸರಿಯಾಗಿದೆಯೇ? ಸಧ್ಯ 150 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಯುತ್ತಿದೆ. 1,700 ಕೋಟಿ ಮೊತ್ತದ ಯೋಜನೆ. ಇದನ್ನು ಕಾಲಮಿತಿಯೊಳಗೆ ಮುಗಿಸುವ ಗುರಿ ಹೊಂದಿದ್ದೇವೆ. ಮುಂದೆಯೂ ಇಂತಹ ಯೋಜನೆ ಕೈಗೆತ್ತಿಕೊಳ್ಳುವ ಉದ್ದೇಶವಿದೆ. ಈ ವಿಚಾರವಾಗಿ ಸ್ಥಳೀಯ ಶಾಸಕರ ಅಭಿಪ್ರಾಯ ಏನಿದೆ ಎಂದು ಚರ್ಚೆ ಮಾಡಿದ್ದೇನೆ. ಮತ್ತೆ ಕೆಲವು ಯೋಜನೆ ಕಾಮಗಾರಿ ಆದೇಶ ಆಗಿಲ್ಲ. ಬೆಂಗಳೂರಿನ ರಸ್ತೆಗಳನ್ನು ಸುಧಾರಿಸಲು 600 ಕೋಟಿ ಮೊತ್ತದ ಯೋಜನೆ ಹಮ್ಮಿಕೊಂಡಿದ್ದೇವೆ. ಇದನ್ನೂ ಓದಿ:
ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ಬೆಂಗಳೂರಿನ ಕೆಲವು ಸಂಚಾರಿ ಯೋಜನೆಗಳ ಬಗ್ಗೆ ಅವರು ಏನು ಹೇಳಿದ್ದಾರೆ ಎಂದು ಹೆಚ್ಚಿನ ಮಾಹಿತಿ ಇಲ್ಲ. ಅವರು ಒಳ್ಳೆಯ ಸಲಹೆ ಕೊಟ್ಟಿದ್ದರೆ ತೆಗೆದುಕೊಳ್ಳುತ್ತೇವೆ. ರಾಜಕಾರಣ ಇದ್ದರೆ ನಾವು ಅದನ್ನು ನಿಭಾಯಿಸುತ್ತೇವೆ.
