ಮಾಜಿ ಸಚಿವಗೆ ಖಡಕ್ ಸೂಚನೆ ಕೊಟ್ಟ ಬಿಜೆಪಿ ಹೈಕಮಾಂಡ್!

ಮಾಜಿ ಸಚಿವಗೆ ಖಡಕ್ ಸೂಚನೆ ಕೊಟ್ಟ ಬಿಜೆಪಿ ಹೈಕಮಾಂಡ್!

ಶಿವಮೊಗ್ಗ: ಬಾರಿ ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ಪುತ್ರ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡದಿದ್ದ ಕಾರಣ ಸ್ವತಃ ಈಶ್ವರಪ್ಪ ಅವರೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಕೆ ಎಸ್ ಈಶ್ವರಪ್ಪ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಾಮಪತ್ರವನ್ನು ವಾಪಸ್ ಪಡೆಯದಿದ್ದರೆ ಬಿಜೆಪಿ ಹೈ ಕಮಾಂಡ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತದೆ ಎಂಬ ಮಾಹಿತಿ ಹೊರಬಿದ್ದಿದ್ದು ಇದೇ ತಿಂಗಳು ಏಪ್ರಿಲ್ 22 ರವರೆಗೆ ಮಾತ್ರ ಈಶ್ವರಪ್ಪ ಅವರಿಗೆ ಹೈಕಮಾಂಡ್ ಸಮಯ ನಿಗದಿ ಮಾಡಿದೆ ಎಂದು ಹೇಳಲಾಗಿದೆ.

ಹಾಗಿದ್ದರೆ ಬಿಜೆಪಿ ಹೈಕಮಾಂಡ್ ನಿರ್ಧಾರದಂತೆ ಈಶ್ವರಪ್ಪ ಅವರು ಸಲ್ಲಿಸಿರುವ ನಾಮಪತ್ರವನ್ನು ಹಿಂಪಡೆಯುತ್ತಾರೆ ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಹೆಚ್ಚಾಗಿದೆ.

ಹೌದು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ನಾಮಪತ್ರ ವಾಪಸ್ ಪಡೀದಿದ್ರೆ ಬಿಜೆಪಿಯಿಂದ ಈಶ್ವರಪ್ಪಉಚ್ಛಾಟನೆ ಮಾಡುವ ಸಾಧ್ಯತೆ ಇದೆ. ಏಪ್ರಿಲ್ 22ರ ವರೆಗೂ ಕಾದು ನೋಡಲು ಹೈಕಮಾಂಡ್ ಮುಂದಾಗಿದೆ. ಈಶ್ವರಪ್ಪರನ್ನ ಪಕ್ಷದಿಂದ ಉಚ್ಛಾಟಿಸೋ ನಿರ್ಧಾರಕ್ಕೆ ಹೈಕಮಾಂಡ್ ಬಂದಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡಿದ್ದಾರೆ. ಕೆ.ಎಸ್ ಈಶ್ವರಪ್ಪ ಮನವೊಲಿಕೆಯನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ.

Related