ಬಿಜೆಪಿ ಭ್ರಮೆಯಲ್ಲಿ ಬದುಕುತ್ತಿದೆ: ಸಿಎಂ

ಬಿಜೆಪಿ ಭ್ರಮೆಯಲ್ಲಿ ಬದುಕುತ್ತಿದೆ: ಸಿಎಂ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಸೋಲಿನ ಭಯದಲ್ಲಿದೆ ಆದ್ದರಿಂದ ನಮ್ಮ ಕಾಂಗ್ರೆಸ್ ಪಕ್ಷವನ್ನು ಹುನ್ನಾರ ಮಾಡಿ ಸೋಲಿಸಲು ಪ್ರಯತ್ನ ಪಡುತ್ತಿದೆ ಆದರೆ ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿದ್ದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವಆರೋಪ ಹೊರಿಸಿ ರೂ.1823 ಕೋಟಿ ಪಾವತಿಸುವಂತೆ ಐಟಿ ಇಲಾಖೆ ನೋಟೀಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ ರೂ.4.5 ಲಕ್ಷ ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ ರೂ.42 ಕೋಟಿ ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ ರೂ.4263 ಕೋಟಿ ಪಾವತಿಸಬೇಕಾಗಿದೆ ಎಂದರು.

 

Related