BJP, JDS ನಾಯಕರು ಹಿಟ್ ಅಂಡ್ ರನ್ ಕೆಲಸ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

BJP, JDS ನಾಯಕರು ಹಿಟ್ ಅಂಡ್ ರನ್ ಕೆಲಸ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಆಡಳಿತವನ್ನು ವಿರೋಧ ಪಕ್ಷಗಳು ಸಹಿಸಿಕೊಳ್ಳುತ್ತಿಲ್ಲವೆಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಿಟ್ ಅಂಡ್ ರನ್ ಮಾಡುವುದನ್ನು ಬಿಟ್ಟು ನಮ್ಮ ಸರಕಾರ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದಾಖಲೆಗಳಿದ್ದರೆ ಅವುಗಳನ್ನು ನಾಗಮೋಹನ್ ದಾಸ್ ಸಮಿತಿಗೆ ನೀಡಲಿ ಆಗ ತನಿಖೆ ಆಗುತ್ತದೆ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷ ಮಾಡುತ್ತಿಲ್ಲ, ಹೊರತಾಗಿ ಕೇಂದ್ರದಲ್ಲಿರುವ ಬಿಜೆಪಿ ಪಕ್ಷ ತೆರಿಗೆ ವಿಚಾರದಲ್ಲಿ ಭ್ರಷ್ಟಾಚಾರ ಮಾಡುತ್ತಿದೆ ಅದನ್ನು ಮೊದಲು ಸರಿಪಡಿಸಿ ಆಮೇಲೆ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಗಳನ್ನು ಮಾಡಿ ಎಂದರು.

ಇನ್ನು ಎಲ್ಲ ಅರೋಪಗಳ ತನಿಖೆ ನಡೆಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ ಎಂದಿದ್ದಾರೆ.

 

Related