ಪ್ರವೀಣ್ ಹತ್ಯೆಗೆ ಬಿಜೆಪಿ ನಾಯಕರ ಆಕ್ರೋಶ..!

ಪ್ರವೀಣ್ ಹತ್ಯೆಗೆ ಬಿಜೆಪಿ ನಾಯಕರ ಆಕ್ರೋಶ..!

ಮಂಗಳೂರು, ಜುಲೈ, 27 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಮುಖಂಡ 31 ವರ್ಷ ಪ್ರವೀಣ್ ಕುಮಾರ್ ನೆಟ್ಟಾರುನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಪ್ರವೀಣ್ಹತ್ಯೆಗೆ ರಾಜ್ಯ ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಕಳೆದ 4 ದಿನಗಳ ಹಿಂದೆ ನಡೆದಿದ್ದ ಅನ್ಯ ಕೋಮಿನ ಯುವಕನೋರ್ವನ ಕೊಲೆಗೆ ಪ್ರತೀಕಾರ ಎನ್ನುವಂತೆ ನಿನ್ನೆ ರಾತ್ರಿ ಬಿಜೆಪಿ ಯುವಮೋರ್ಚಾದ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ. ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ, ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಎಂಬ ಯುವಕನನ್ನು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿದ್ದಾರೆ.

ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಪ್ರವೀಣ್ ಕೋಳಿ ಮಾಂಸದ ಅಂಗಡಿಯನ್ನು ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಇನ್ನೇನು ಮನೆಗೆ ಹೋಗಲು ಸಿದ್ಧತೆ ಮಾಡುತ್ತಿರುವ ಸಂದರ್ಭದಲ್ಲಿಯೇ ಬೈಕಿನಲ್ಲಿ ಬಂದಿದ್ದ ಮೂವರು ತಲವಾರಿನಿಂದ ಅವರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಪ್ರವೀಣ್ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪ್ರಮೀಣ್ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Related