ಬಿಜೆಪಿ ನಾಯಕರಿಗೆ ಸಿದ್ದು ಗುದ್ದು!

ಬಿಜೆಪಿ ನಾಯಕರಿಗೆ ಸಿದ್ದು ಗುದ್ದು!

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದೆ ಐಶ್ಯಾರಾಮಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆಂದು ಬಿಜೆಪಿಗರು ಮಾಡಿದ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಯಾವ ವಿಮಾನದಲ್ಲಿ ಓಡಾಡುತ್ತಾರೆ? ಅವರದ್ದು ಐಷಾರಾಮಿ ವಿಮಾನ ಅಲ್ಲವೇ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂಥದ್ದು? ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಸಿದ್ದರಾಮಯ್ಯ ಹೇಳಿದರು.

 

 

Related