ಸಿ.ಟಿ. ರವಿಗೆ ಒಲಿಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ?

ಸಿ.ಟಿ. ರವಿಗೆ ಒಲಿಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿಪಕ್ಷ ನಾಯಕರುಗಳಿಲ್ಲದೆ ಸದಾನ, ಕಲಾಪಗಳು ನಡೆದು ಮುಕ್ತಾಯವಾಗಿದ್ದರೂ ಸಹ ಇನ್ನು ಬಿಜೆಪಿಯಲ್ಲಿ ವಿಪಕ್ಷ ನಾಯಕ ಯಾರೆಂದು ಗೊತ್ತಾಗದೆ ಬಿಜೆಪಿ ಪಕ್ಷದಲ್ಲಿ ಗೊಂದಲ ಮಾಡುತ್ತಿದೆ.
ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಯವರಿಗೆ ಕೊಕ್‌ ನೀಡಲಾಗಿದ್ದುಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಸಿ.ಟಿ. ರವಿಯವರು ಮುಂಚೂಣಿಯಲ್ಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬರುತ್ತಿದೆ.
ಲೋಕಸಭಾ ಚುನಾವಣೆ ದೃಷ್ಠಿಯಲ್ಲಿಟ್ಟುಕೊಂಡು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಯ ರಾಷ್ಟ್ರೀಯ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಸಿ.ಟಿ.ರವಿಯವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಲಾಗಿದೆ.
ಸಿಟಿ ರವಿ ಕೂಡ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನಲಾಗಿದೆ. ಹೀಗಾಗಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸ್ಥಾನದಿಂದ ಕಳಗೆ ಇಳಿಸಿ, ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಾ ಅನ್ನೋ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಜೋರಾಗಿದೆ.

Related