Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನನ್ನನ್ನು ಪದೇ ಪದೆ ನೆನೆಯದಿದ್ದರೆ ಬಿಜೆಪಿಯವರಿಗೆ ಸಮಾಧಾನ ಆಗುವುದಿಲ್ಲ: ಡಿಕೆಶಿ
  • Bangalore
  • Front news
  • Politics
  • State

ನನ್ನನ್ನು ಪದೇ ಪದೆ ನೆನೆಯದಿದ್ದರೆ ಬಿಜೆಪಿಯವರಿಗೆ ಸಮಾಧಾನ ಆಗುವುದಿಲ್ಲ: ಡಿಕೆಶಿ

admin August 22, 2025 1 minute read
WhatsApp Image 2025-08-22 at 17.00.04
Spread the love

ಬೆಂಗಳೂರು: ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲವಾದರೆ ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

ನನ್ನನ್ನು ಪದೇ ಪದೆ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ. ನಿಮ್ಮ ಪಕ್ಷದವರಿಗೆ ಖುಷಿ ಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ ಎಂದು ಛೇಡಿಸಿದರು.

ಅಂದು ವಿಧಾನಸೌಧದ ಎದುರು ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು. ಇದನ್ನೂ ಓದಿ: ಅಧಿವೇಶನದಲ್ಲಿ RSS ಪ್ರಾರ್ಥನೆ ಹಾಡಿ ಗಮನ ಸೆಳೆದ ಡಿಸಿಎಂ

ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ. ಇದೇ ಮಾತನ್ನು ನಾನು ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ. ನಾನು ಅಲ್ಲಿಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್ ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಶಿಕ್ಷಣದ ಹಣದಲ್ಲೂ ಕಾಂಗ್ರೆಸ್‌‍ ಸರ್ಕಾರ ಲೂಟಿ  ಹೊಡೆಯುತ್ತಿದೆ: ಎಚ್‌.ಡಿ ರೇವಣ್ಣ
Next: ಈ ಬಾರಿ ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.