Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • BJP ಕಚೇರಿಯಲ್ಲೇ ನೇಣಿಗೆ ಶರಣಾದ ಕಾರ್ಯಕರ್ತ! ಕಾರಣವೇನು ಗೊತ್ತಾ?
  • Bangalore
  • Crime
  • Front news
  • Politics
  • State

BJP ಕಚೇರಿಯಲ್ಲೇ ನೇಣಿಗೆ ಶರಣಾದ ಕಾರ್ಯಕರ್ತ! ಕಾರಣವೇನು ಗೊತ್ತಾ?

admin April 4, 2025
Spread the love

ಬೆಂಗಳೂರು: ಬಿಜೆಪಿ ಕಾರ್ಯಕರ್ತನೊಬ್ಬನು ಬೆಂಗಳೂರು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, 35 ವರ್ಷದ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ.

ವಿನಯ್ ಸೋಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಕಾರಣಕ್ಕೋಸ್ಕರ ಮನನೊಂದ ವಿನಯ್ ಅವರು ನಾಗವಾರದ ಬಿಜೆಪಿ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭಾ ಅಂಗೀಕಾರ ಐತಿಹಾಸಿಕ ಕ್ಷಣ: ವಿಜಯೇಂದ್ರ

ಈ ಪೋಸ್ಟ್‌ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು 2 ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಬಹಳ ಮನನೊಂದಿದ್ದ ವಿನಯ್‌ ಇಂದು (ಗುರುವಾರ ಏ. 04) ರಂದು ಮುಂಜಾನೆ 4:30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನು ವಿನಯ್ ಆತ್ಮಹತ್ಯೆ ಕುರಿತಾಗಿ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಡೆತ್ ನೋಟ್ ಬರೆದು ಹರಿ ಬಿಟ್ಟಿರುವುದು ಕಾಂಗ್ರೆಸ್ಸಿಗರಿಗೆ ಢವಢವ ಶುರುವಾದಂತಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಟಾಲಿವುಡ್‌ನತ್ತ ಮುಖ ಮಾಡಿದ ಧರ್ಮ
Next: ರಮ್ಯಾ ಸ್ಟೈಲ್‌ಗೆ ಫಿದಾ ಆದ ಫ್ಯಾನ್ಸ್

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.