ಸತೀಶ್ ರೆಡ್ಡಿ ನೇತೃತ್ವದಲ್ಲಿ ಸುಮಲತೆಗೆ ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

ಸತೀಶ್ ರೆಡ್ಡಿ ನೇತೃತ್ವದಲ್ಲಿ ಸುಮಲತೆಗೆ ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

 

ಬೊಮ್ಮನಹಳ್ಳಿ: ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ನಿನ್ನೆ ಶುಕ್ರವಾರ ಏಪ್ರಿಲ್ 5 ರಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ಇನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಸುಮಲತಾ ಅಂಬರೀಶ್ ಅವರನ್ನು ಬೊಮ್ಮನಹಳ್ಳಿಯ ಜನಪ್ರಿಯ ಶಾಸಕರು ಹಾಗೂ ಧೀನದಲಿತರ ಉದ್ದಾರಕರು, ಸಮಾನತೆಯ ಸಾಹುಕಾರ ಎಂ.ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಶ್ರೀಮತಿ ಸುಮಲತಾಅಂಬರೀಶ್ ಹಾಗೂ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪರವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅರಿಕೆರೆ ವಾರ್ಡ ಬಿಜೆಪಿ ಅಧ್ಯಕ್ಷರಾದ ಮಂಜುನಾಥ್ ಅವರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Related