ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಾಂಬ್ ಬೆದರಿಕೆ ಸದ್ದು

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಾಂಬ್ ಬೆದರಿಕೆ ಸದ್ದು

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ನಾಲ್ಕು ತಿಂಗಳುಗಳಿಂದ ಪ್ರತಿ ತಿಂಗಳು ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅದರಂತೆ ಇಂದು (ಬುಧವಾರ ಮೇ 23) ಕೂಡ ಬೆಂಗಳೂರು ನಗರದಲ್ಲಿರುವ ಪ್ರತಿಷ್ಠಿತ ಮೂರು ಹೋಟೆಲ್ ಗಳಿಗೆ ಬಾಂಬ್ ಇಡುವುದಾಗಿ  ಇ-ಮೇಲ್ ಮೂಲಕ ಸಂದೇಶ ಬಂದಿದೆ.

ಹೌದು, ಬೆಂಗಳೂರು ನಗರದಲ್ಲಿರುವ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ನಗರದ 3 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಇಂದು (ಗುರುವಾರ) ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ:  ಸಿಎಂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ

ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.

ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್‌ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.

Related