ಬೂತ್ ಮಟ್ಟದ ಸಭೆ

ಬೂತ್ ಮಟ್ಟದ ಸಭೆ

ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ತೇಜಸ್ವಿ ಸೂರ್ಯ ಅವರು ಕಣಕ್ಕೆ ಇದ್ದಿದ್ದು ಇವರ ವಿರುದ್ಧ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಈಗಾಗಲೇ ನಮ್ಮ ಪತ್ರ ಸಲ್ಲಿಕೆ ಮಾಡಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದು ಇಂದು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಆಡುಗೋಡಿ ಮತು ಲಕ್ಕಸಂಡ್ರ ವಾರ್ಡ್ ನಲ್ಲಿ ಆಯೋಜಿಸಲಾಗಿದ್ದ ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸೌಮ್ಯ ರೆಡ್ಡಿ ಅವರಿಗೆ ಲಕ್ಸಂದ್ರ ದಲ್ಲಿ ಸಾವಿರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಆರತಿ ಮಾಡುವ ಮೂಲಕ ಸೌಮ್ಯ ರೆಡ್ಡಿ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸನ್ಮಾನ ಶ್ರೀ ರಾಮಲಿಂಗಾರೆಡ್ಡಿ ರವರು ಸಾರಿಗೆ ಮತು ಮುಜರಾಯಿ ಸಚಿವರು, ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿಯಾದ ಶ್ರೀಮತಿ ಸೌಮ್ಯ ರೆಡ್ಡಿ ರವರು, ಮಾಜಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಮತ್ತು ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related