ಬಜೆಟ್ ಮಂಡನೆ: ಅಲ್ಪಸಂಖ್ಯಾತರಿಗೆ ಉತ್ತಮ ಯೋಜನೆ

ಬಜೆಟ್ ಮಂಡನೆ: ಅಲ್ಪಸಂಖ್ಯಾತರಿಗೆ ಉತ್ತಮ ಯೋಜನೆ

ಬೆಂಗಳೂರು: ಇಂದು ಕರ್ನಾಟಕ ರಾಜ್ಯದಲ್ಲಿ 14ನೆಯ ಬಾರಿಗೆ ಬಜೆಟ್ ಮಂಡನೆ ಮಾಡಿರುವಂತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಸಮುದಾಯ ಗಳಿಗೆ ವಿಶೇಷವಾದ ಬಜೆಟ್ ಮಂಡನೆಯನ್ನು ಮಾಡಿದರು.

ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಸಮುದಾಯಗಳಿಗೆ ಹಲವಾರು ಯೋಜನೆಗಳನ್ನು ಘೋಷಿಸಿದರು. ಶಿಕ್ಷಣ ಮತ್ತು ಉದ್ಯೋಗಗಳಿಗೆ ಸಂಬಂಧಿಸಿದಂತೆ ಸಮುದಾಯಗಳಿಗೆ ಆದ್ಯತೆ ನೀಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಮುದಾಯಗಳ ಬಡ ವಿದ್ಯಾರ್ಥಿಗಳಿಗೆ ಸಿಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರಕಾರ ನಿಲ್ಲಿಸಿರುವುದರಿಂದ ಅದನ್ನು ಕರ್ನಾಟಕ ಸರ್ಕಾರ ಮುಂದುವರಿಸಲಿದೆ ಮತ್ತು ಇದಕ್ಕಾಗಿ ರೂ. 60 ಕೋಟಿ ತೆಗೆದಿರಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದಲ್ಲಿರುವ ಮೌಲಾನಾ ಆಜಾದ್ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿರುವುದರಿಂದ ಆ ಶಾಲೆಗಳ ಗುಣಮಟ್ಟ ಮತ್ತಷ್ಟು ಹೆಚ್ಚಿಸಲು ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಸಮುದಾಯದ ಯುವಕರಿಗಾಗಿ ರಾಮನಗರ, ಬೆಳಗಾವಿ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Related