ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ…!

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ…!

ಬೆಂಗಳೂರು: ರಾಜ್ಯ ಸರ್ಕಾರದಿಂದ ಇದೀಗ ಸರಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ.  ಇಂದು (ಜೂನ್‌ 20 ಗುರುವಾರ) ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಹೌದು, ಇಂದು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಸಲಹೆಯನ್ನು ಮೀರಿ ವೇತನ ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ ಎಂಬ ಮಾಹಿತಿ ಇದೀಗ ತಿಳಿದು ಬಂದಿದೆ. ಇದನ್ನೂ ಓದಿ:ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ, ರಾಜ್ಯ ಸರ್ಕಾರ

ಈಗಾಗಲೇ ವೇತನ ಆಯೋಗದ ಶಿಫಾರಸುಗಳನ್ನು ಸಂಪೂರ್ಣಗೊಳಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನೌಕರರಿಗೆ ಶೇಕಡಾ 27ರಷ್ಟು ವೇತನ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

27%ರಷ್ಟು ವೇತನ ಹೆಚ್ಚಳ ಮಾಡಲು ಸೈ ಎಂದಿದ್ದಾರೆ. ನೌಕರರು ನಿರೀಕ್ಷೆ ಮಾಡಿದ ಹೆಚ್ಚಳ ಜಾರಿಯಾಗುವ ಸಾಧ್ಯತೆಯಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಂಪುಟ ಸಭೆ ಸಿಎಂಗೆ ಬಿಟ್ಟಿದೆ.

ಈ ಕುರಿತು ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು.

 

Related