ಬಸ್ ಓವರ್ ಟೇಕ್ :15 ಜನರಿಗೆ ಗಾಯ

ಬಸ್ ಓವರ್ ಟೇಕ್ :15 ಜನರಿಗೆ ಗಾಯ

ಧಾರವಾಡ, ಮಾ. 14 : ವಾಹನವೊಂದನ್ನು ಓವರ್ಟೇಕ್ ಮಾಡಲು ಹೋಗಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕುಸುಗಲ್ ಬಳಿಯ ಇಂಗಳಹಳ್ಳಿ ಕ್ರಾಸ್ ನಡೆದಿದೆ.
ಇಳಕಲ್ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಬಸ್ನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕೆಲ ಗಾಯಾಳುಗಳು ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನು ಕೆಲ ಪ್ರಯಾಣಿಕರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸಣ್ಣ-ಪುಟ್ಟ ಗಾಯಗಳಾದ ಪ್ರಯಾಣಿಕರು ಆಸ್ಪತ್ರೆಯತ್ತ ಬಂದಿಲ್ಲವೆಂದು ಪ್ರಯಾಣಿಕರು ತಿಳಿಸಿದ್ದಾರೆ.

Related