ಉಪಚುನಾವಣೆ ವೇತನ ಸಹಿತ ರಜೆ ಘೋಷಣೆ

ಉಪಚುನಾವಣೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು : ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ.

ಈ ಮೂರು ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಮತದಾನ ನಡೆಯುವುದರಿಂದ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ, ಅನುದಾನರಹಿತ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ರಾಜ್ಯ, ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕ್‌ಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೈಗಾರಿಕೆಗಳು, ಇತರ ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಸ್ಥೆಗಳು, ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ದಿನಗೂಲಿ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹ ಮತದಾರರಿಗೆ ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಈ ರಜೆ ತುರ್ತು ಸೇವೆಗಳಲ್ಲಿರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದರೂ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Related