Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ʼಕೈʼ ಸರ್ಕಾರ ವಿರುದ್ಧ ಬಿವೈವಿ ಆಕ್ರೋಶ
  • Bangalore
  • Front news
  • Politics
  • State

ʼಕೈʼ ಸರ್ಕಾರ ವಿರುದ್ಧ ಬಿವೈವಿ ಆಕ್ರೋಶ

admin May 6, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೆಪಿಎಸ್‌ಸಿ ಪರೀಕ್ಷೆ ನಡೆಸುವಾಗ ಪ್ರತಿ ಸಾರಿನೂ ರಾಜ್ಯ ಸರ್ಕಾರದಿಂದ ಲೋಪದೋಷಗಳು ಕಂಡುಬಂದಿದ್ದು, ಮತ್ತೆ ಇದೀಗ ಸೋಮವಾರ ಮೇ 5 ರಂದು ನಡೆದ ಪರೀಕ್ಷೆಯಲ್ಲಿ ಮತ್ತೆ ರಾಜ್ಯ ಸರ್ಕಾರ ಯಡವಟ್ಟು ಮಾಡಿದ್ದು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅನ್ಯಾಯವೆಸಗುತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆಕ್ರೋಶ ಅವರ ಹಾಕಿದ್ದಾರೆ.

ಈ ಕುರಿತು ತಮ್ಮ ಸೋಶಿಯಲ್ ಖಾತೆಯಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ 3 ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ. ಇದೀಗ ಮತ್ತೊಂದು ಪ್ರಮಾದವೆಸಗಿ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜತೆ ಚೆಲ್ಲಾಟವಾಡಿ ಸಾರ್ವಜನಿಕ ವಲಯದಲ್ಲೂ ಆಕ್ರೋಶಕ್ಕೆ ಗುರಿಯಾಗಿದೆ.

ಸೋಮವಾರ ನಡೆದ ಪರೀಕ್ಷೆಯಲ್ಲಿ ಬೆಂಗಳೂರಿನ ಕೇಂದ್ರವೊಂದರಲ್ಲಿ ಸೀಲ್ ತೆರೆದಿದ್ದ ಪ್ರಶ್ನೆಪತ್ರಿಕೆಯ ಬಂಡಲ್ ಪತ್ತೆಯಾಗಿದ್ದು, ಇದನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರೂ ಸಹ ಒಪ್ಪಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ಹುಟ್ಟುಹಾಕಿದೆ. ಕರ್ನಾಟಕ ಲೋಕಸೇವಾ ಆಯೋಗವು ಪದೇ ಪದೇ ಎಡವಟ್ಟುಗಳು, ಗೊಂದಲಗಳನ್ನು ಸೃಷ್ಟಿಸಿ ದೇಶದೆದುರು ಕರ್ನಾಟಕದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದು ದುರಂತದ ದೌರ್ಭಾಗ್ಯವೇ ಸರಿ ಎಂದಿದ್ದಾರೆ. ಇದನ್ನೂ ಓದಿ:

ಈ ಕೂಡಲೇ ಪರೀಕ್ಷಾ ಕೊಠಡಿಗೆ ಪ್ರಶ್ನೆಪತ್ರಿಕೆಗಳು ಬರುವ ಮುನ್ನವೇ ಬಂಡಲ್ ತೆರೆದಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಕೆಪಿಎಸ್ಸಿ ಪರೀಕ್ಷಾ ಅಭ್ಯರ್ಥಿಗಳಿಗಾಗುತ್ತಿರುವ ಬಹುದೊಡ್ಡ ಅನ್ಯಾಯ, ದ್ರೋಹಗಳನ್ನು ಸರಿಪಡಿಸದಿದ್ದರೆ ಲಕ್ಷಾಂತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆ ತೆರಬೇಕಾದೀತು ಎಂದು ಎಚ್ಚರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: HDK ಆರೋಗ್ಯದ ಬಗ್ಗೆ ನಿಖಿಲ್ ಹೇಳಿದ್ದೇನು?
Next: ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು: ದಿನೇಶ್ ಗುಂಡೂರಾವ್ !

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.