ಉನ್ನತ ಮಟ್ಟದ ಸಭೆ : ಸಿ ಎಂ

ಉನ್ನತ ಮಟ್ಟದ ಸಭೆ : ಸಿ ಎಂ

ಬೆಂಗಳೂರು : ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್ ಹಾಗೂ ಗೋವಿಂದ ಕಾರಜೋಳ, ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಿ.ಶ್ರೀರಾಮುಲು, ಭೈರತಿ ಬಸವರಾಜ, ಸಂಸದ ತೇಜಸ್ವಿ ಸರ‍್ಯ, ಮುಖ್ಯ ಕಾರ್ಯದರ್ಶ ಟಿ. ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

10.31 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ

ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆ ಜರುಗಿತು.

ಪ್ರಾಧಿಕಾರದ ಒಟ್ಟು 10.31 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದರು. ಜಿಲ್ಲಾವಾರು ಉಪಸಮಿತಿ ಹಾಗೂ ಕರ‍್ಯಕಾರಿ ಸಮಿತಿಗಳ ರಚನೆಗೂ ಮುಖ್ಯಮಂತ್ರಿ ಸಭೆಯಲ್ಲಿ ಅನುಮೋದನೆ ನೀಡಿದರು.

Related