ರೈತ ಸಂಘಟನೆಗಳಿಂದ ಬೆಂಗಳೂರು ಬಂದ್ ಗೆ ಕರೆ

ರೈತ ಸಂಘಟನೆಗಳಿಂದ ಬೆಂಗಳೂರು ಬಂದ್ ಗೆ ಕರೆ

ಬೆಂಗಳೂರು,ಸೆ.23: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರೋದನ್ನು ಖಂಡಿಸಿ ಬೆಂಗಳೂರು ನಗರದಲ್ಲಿ ಪ್ರತಿಭಟನೆ ಜೋರಾಗಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್.26ರಂದು ಬೆಂಗಳೂರು ಬಂದ್ ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಘೋಷಣೆ ಮಾಡಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವಂತ ರೈತರ ಸುಪ್ರಿಂ ನಡೆಯನ್ನು ವಿರೋಧಿಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪದೇ ಪದೇ ಕಾವೇರಿ ನೀರು ಬಿಡೋದಿಲ್ಲ ಅಂತ ಹೇಳಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಇದನ್ನು ನಿಲ್ಲಿಸಬೇಕು ಅಂತ ಒತ್ತಾಯಿಸಿದರು.

ರಾಜ್ಯದ ರೈತರಿಗೆ ಕುಡಿಯೋದಕ್ಕೆ ನೀರಿಲ್ಲ. ಬೆಂಗಳೂರು ಜನತೆಗೂ ಕಾವೇರಿ ನೀರು ಸಮಸ್ಯೆ ಆಗಲಿದೆ. ಹೀಗಿದ್ದರೂ, ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರೋದು ಸರಿಯಲ್ಲ. ರಾಜ್ಯ ಸರ್ಕಾರ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು, ತಮಿಳುನಾಡಿಗೆ ನೀರು ಬಿಡದಂತ ನಿರ್ಣಯವನ್ನು ಕೈಗೊಳ್ಳಬೇಕು ಅಂತ ಆಗ್ರಹಿಸಿದರು.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸೋದನ್ನು ಖಂಡಿಸಿ ಸೆಪ್ಟೆಂಬರ್ 26ರ ಮಂಗಳವಾರದಂದು ಬೆಂಗಳೂರು ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು.

Related