ಆನ್ಲೈನ್ ಕ್ಲಾಸ್ ರದ್ದು..!

ಆನ್ಲೈನ್ ಕ್ಲಾಸ್ ರದ್ದು..!

ಬೆಂಗಳೂರು : ಆನ್ಲೈನ್ ಮೂಲಕ ಎಳೆಯ ವಯಸ್ಸಿನ ಮಕ್ಕಳಿಗೆ ಶಿಕ್ಷಣ ನೀಡಿದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದರು.

ಹೀಗಾಗಿ ಸರ್ಕಾರ 1ರಿಂದ 5ನೇ ತರಗತಿವರೆಗೆ ಸರ್ಕಾರಿ, ಖಾಸಗಿ, ಅನುದಾನ ಹಾಗೂ ಅನುದಾನರಹಿತ ಸೇರಿದಂತೆ ಯಾವುದೇ ಶಾಲೆಗಳಲ್ಲಿ ಈ ಹಂತದ ಮಕ್ಕಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡುವುದನ್ನು ರದ್ದುಪಡಿಸಿ ಅಧಿಕೃತ ಆದೇಶ ಹೊರಡಿಸಲಿದೆ.

ಈ ಸಂಬಂಧ ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ ಅವರು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ ಅಥವಾ ನಾಳೆಯೊಳಗೆ ರ್ಕಾರದಿಂದ ಆದೇಶ ಹೊರಡಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಹತ್ತು ರ್ಷದೊಳಗಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅತಿಯಾದ ಕಂಪ್ಯೂಟರ್ ಬಳಕೆ, ಇಡೀ ಏಕಾಗ್ರತೆಯನ್ನು ಕಂಪ್ಯೂಟರ್ ಮೇಲೆ ಕೇಂದ್ರೀಕರಿಸುವುದರಿಂದ ಕಣ್ಣಿನ ದೃಷ್ಟಿಯ ಮೇಲೂ ಪರಿಣಾಮ ಬೀರುವ ಸಂಭವವಿದೆ. ಹೀಗಾಗಿ ಆನ್ಲೈನ್ ಶಿಕ್ಷಣ ಈ ಹಂತದ ಮಕ್ಕಳಿಗೆ ಸರಿಯಲ್ಲ ಎಂದು ಆಕ್ಷೇಪಿಸಿದೆ.

1ರಿಂದ 9ನೇ ತರಗತಿವರೆಗೆ ಪರೀಕ್ಷೆಯನ್ನೇ ನಡೆಸದೆ ಎಲ್ಲಾ ವಿದ್ಯರ್ಥಿಗಳನ್ನು ಉತ್ತರ್ಣ ಮಾಡಲಾಗಿದೆ. ಇದೀಗ ಜೂ.25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ. ನಿಯಮದ ಪ್ರಕಾರ ಜೂನ್ ತಿಂಗಳಿನಿಂದಲೇ ಶೈಕ್ಷಣಿಕ ಅವಧಿ ಆರಂಭವಾಗಬೇಕಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪರಿಣಾಮ ಶಿಕ್ಷಣ ಸಂಸ್ಥೆಗಳನ್ನು ಸದ್ಯಕ್ಕೆ ಆರಂಭಿಸದಿರಲು ತರ್ಮಾನಿಸಲಾಗಿದೆ.

ಜುಲೈ ತಿಂಗಳಿನಿಂದ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ರ್ಕಾರ ತೆರೆಮರೆಯಲ್ಲಿ ಕಸರತ್ತು ನಡೆಸಿತ್ತು. ಆದರೆ ಸರ್ವಜನಿಕ ವಲಯ ಮತ್ತು ಪೋಷಕರು ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ರ್ಕಾರ ತನ್ನ ನರ್ಧಾರದಿಂದ ಹಿಂದೆ ಸರಿದಿದೆ. ಈ ಬೆಳವಣಿಗೆಗಳ ನಡುವೆಯೇ ಆಗಸ್ಟ್ ತಿಂಗಳವರೆಗೂ ಯಾವುದೇ ಶಾಲಾಕಾಲೇಜುಗಳನ್ನು ತೆರೆಯಬಾರದೆಂದು ಕೇಂದ್ರ ರ್ಕಾರ ನಿನ್ನೆಯಷ್ಟೇ ಸೂಚನೆ ಕೊಟ್ಟಿದೆ

Related