ಸುಮಲತಾ ಪ್ರಚಾರ ರದ್ದು; ದೋಸ್ತಿ ಪಾಳ್ಯದಲ್ಲಿ ಬಾರಿ ಚರ್ಚೆ

ಸುಮಲತಾ ಪ್ರಚಾರ ರದ್ದು; ದೋಸ್ತಿ ಪಾಳ್ಯದಲ್ಲಿ ಬಾರಿ ಚರ್ಚೆ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಗೆ ಮಂಡ್ಯದ ಹಾಲಿ ಸಂಸದೆ ಸುಮಲತಾ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡದಿದ್ದ ಕಾರಣ ಅವರು ಈಗ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಇಂದು (ಮಂಗಳವಾರ) ಸುಮಲತಾ ಅಂಬರೀಶ್ ಅವರು ಪ್ರಚಾರವನ್ನು ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿತ್ತು. ಆದರೆ ಇದೀಗ ಸುಮಲತಾ ಅವರು ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಮತ ಪ್ರಚಾರ ರದ್ದಾಗಿದೆ. ಇದರಿಂದ ದೋಸ್ತಿ ಪಾಳ್ಯದಲ್ಲಿ ಬಾರಿ ಚರ್ಚೆ ನಡೆಯುತ್ತಿದೆ.

ಹೌದು, ಲೋಕಸಭಾ ಚುನಾವಣೆಯಲ್ಲಿ ಇಂದು ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಪರ ಸುಮಲತಾ ಮತಯಾಚನೆ ಮಾಡುವ ಕಾರ್ಯಕ್ರಮ ಮಂಗಳವಾರ ನಿಗದಿಯಾಗಿತ್ತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ನಿಂತಿದ್ದ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. ಈ ಬಾರಿ ಸುಮಲತಾ ಮಂಡ್ಯ ಟಿಕೆಟ್‌ ಆಕಾಂಕ್ಷಿ ಆಗಿದ್ದರು. ಆದರೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ.

Related