ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ನಡೆಯುತ್ತಿದ್ದು ಸಮೀಕ್ಷೆ ಅವಧಿಯನ್ನು ಮೇ 28 ರ ವರೆಗೆ ವಿಸ್ತರಿಸಲಾಗಿದೆ.
ಹೌದು, ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ದತ್ತಾಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ಮೇ 5 ರಿಂದ ಪ್ರಾರಂಭಿಸಲಾಗಿದೆ. ಈ ಸಮೀಕ್ಷಾ ಅವಧಿಯನ್ನು ಮೇ 28 ರವರೆಗೆ ವಿಸ್ತರಿಸಲಾಗಿದೆ.
ಮೇ 25 ರವರೆಗೆ ಗಣತಿದಾರರಿಂದ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಣೆಯನ್ನು ಮಾಡಲಾಗುತ್ತದೆ. ಮೇ 26 ರಿಂದ ಮೇ 28 ವರೆಗೆ ಮತಗಟ್ಟೆ ಪ್ರದೇಶದಲ್ಲಿ ಆಯೋಜಿಸಿರುವ ವಿಶೇಷ ಶಿಬಿರಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ತಮ್ಮ ಜಾತಿಯ ಕುರಿತು ಮಾಹಿತಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯಾರೂ ಕೂಡ ಸಮೀಕ್ಷೆಯಿಂದ ದೂರ ಉಳಿಯದಂತೆ, ಅರ್ಹರು ಭಾಗವಹಿಸಿ ಸಮೀಕ್ಷೆ ಉದ್ದೇಶವನ್ನು ಸಫಲಗೊಳಿಸುವುದು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ 2ನೇ ವರ್ಷದ ಬೃಹತ್ ಸಾಧನಾ ಸಮಾರಂಭ
ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದವರು ಮತ್ತು ದೂರದ ಊರುಗಳಲ್ಲಿ ಇರುವವರು ಮೇ.19 ರಿಂದ ಮೇ. 28 ರವರೆಗೆ ಆನ್ ಲೈನ್ https://schedulecastesurvey.karnataka.gov.in/selfdeclaration ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
