ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಬಳ್ಳಾರಿ : ಜಿಲ್ಲಾಡಳಿತದ ವತಿಯಿಂದ ಬಳ್ಳಾರಿಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಚೇರಿ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಮಂಗಳವಾರ ಆಚರಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರು ಶ್ರೀಕೃಷ್ಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಪ್ರತಿವರ್ಷ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಕೋವಿಡ್ ಹಿನ್ನೆಲೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಶ್ರೀಕೃಷ್ಣರ ತತ್ವಾದರ್ಶಗಳು ಹಾಗೂ ಗೀತೋಪದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದರು.

ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಪಿ.ತಿಮ್ಮಪ್ಪ ಯಾದವ್ ಅವರು ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಯಷಗಳನ್ನು ತಿಳಿಸಿದರು.

Related