ಜೆ.ಪಿ. ನಡ್ಡಾ ಕಣ್ಣು ಚುನಾವಣೆಯತ್ತ

ಜೆ.ಪಿ. ನಡ್ಡಾ ಕಣ್ಣು ಚುನಾವಣೆಯತ್ತ

ನವದೆಹಲಿ : ನೂರಿಪ್ಪತ್ತು ದಿನಗಳ ಕಾಲ ರಾಷ್ಟç ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾರವರು 2024 ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ.

ಡಿಸೆಂಬರ್ ಮೊದಲ ವಾರದಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸಲಿದ್ದು, ಉತ್ತರ್ ಖಂಡ್ ಮೊದಲ ರಾಜ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ಡಿ.5 ರಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸುವ ಸಾಧ್ಯತೆಯಿದ್ದು, ಪ್ರತಿಯೊಂದು ರಾಜ್ಯಕ್ಕೂ ಭೇಟಿ ನೀಡಿ, ಎಲ್ಲಾ ಬೂತ್ ಮಟ್ಟದ ಮುಖ್ಯಸ್ಥರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಪ್ರತಿಯೊಂದು ರಾಜ್ಯದ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಹಿರಿಯ ಮುಖಂಡರು ಮಾತ್ರವಲ್ಲದೇ, ಪಕ್ಷದ ಶಾಸಕರು ಹಾಗೂ ಸಂಸದರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಪ್ರವಾಸದ ವೇಳೆಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸದ ಲೋಕಸಭಾ ಕ್ಷೇತ್ರಗಳು ಹಾಗೂ ವಲಯಗಳಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪಕ್ಷದ  ಮುಖಂಡರೊಂದಿಗೆ  ಕಾರ್ಯತಂತ್ರ  ರೂಪಿಸಲಿದ್ದಾರೆ ಎಂದು ಅವರು ತಿಳಿಸಿದರು.

ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂನಲ್ಲಿ ಚುನಾವಣೆಗಾಗಿ ಪಕ್ಷದ ಸಿದ್ಧತೆಯನ್ನು ಅವರು ಪರಿಶೀಲನೆ ನಡೆಸಲಿದ್ದಾರೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು.

Related