Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಕಿವುಡಾಗಿದೆ: ಸಿಎಂ
  • Politics
  • State

ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಕಿವುಡಾಗಿದೆ: ಸಿಎಂ

admin January 31, 2025 1 minute read
Spread the love

ಕೊಡಗು: ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಿವುಡಾಗಿದೆ. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ದೆಹಲಿಗೆ ಹೋಗಿ ತೆರಿಗೆ ಹಂಚಿಕೆಯಲ್ಲಿ ಕಡಿಮೆ ಅನುದಾನ ಬರುತ್ತಿದೆ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ, ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಶಾಸಕರು, ಸಂಸದರು, ಸಚಿವರು ದೆಹಲಿಯಲ್ಲಿಯೇ ಪ್ರತಿಭಟನೆ ಮಾಡಿದೆವು. ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದರು. ಇದನ್ನೂ ಓದಿ: ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕು ಸ್ಥಾಪನೆ

ಕಾಮಗಾರಿಗೆ ಅನುದಾನ ನೀಡಿ ಶೀಘ್ರಗತಿಯಲ್ಲಿ ಪೂರ್ಣ

2016 ರಲ್ಲಿ ನಮ್ಮ ಸರ್ಕಾರ ಕಾಮಗಾರಿಗೆ ಮಂಜೂರಾತಿ ಕೊಟ್ಟು, 2017 ರಲ್ಲಿ ಪ್ರಾರಂಭವಾಗಿತ್ತು. ಹಿಂದಿನ ಸರ್ಕಾರ ಅದನ್ನು ಪೂರ್ಣಮಾಡದೇ ವಿಳಂಬವಾಯಿತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ಅನುದಾನವನ್ನು ನೀಡಿ ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದ್ದೇವೆ ಎಂದರು.

ಕೊಡಗಿನಲ್ಲಿ ಸಿ ಅಂಡ್ ಡಿ ಭೂಮಿ ಮತ್ತು ಸೆಕ್ಷನ್ 4 ಅಧಿಸೂಚಿತ ಜಾಗವನ್ನು ಮೀಸಲು ಅರಣ್ಯ ಮಾಡುವ ಪ್ರಸ್ತಾವಕ್ಕೆ ರೈತರು ವ್ಯಾಪಕ ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಕುರಿತು ಸಮಿತಿ ರಚಿಸಬೇಕಾಗುತ್ತದೆ.  ಸಮಿತಿ ವರದಿ ಕೊಟ್ಟ ನಂತರ ಸರ್ಕಾರ ಕ್ರಮ ವಹಿಸಲಿದೆ ಎಂದರು.

ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ

ಸರ್ಕಾರಿ ಭೂಮಿ ಭೂ ಗುತ್ತಿಗೆ ನೀಡುವುದಕ್ಕೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ ಸರ್ಕಾರಿ ಭೂಮಿ ಕೊಟ್ಟರೆ ವಿರೋಧ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿವೇಶನ ಇಲ್ಲದಿರುವವರಿಗೆ,  ಜಮೀನು ಇಲ್ಲದವರಿಗೂ ಭೂಮಿ ಕೊಡುತ್ತೇವೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕು ಸ್ಥಾಪನೆ
Next: ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ: ಸಿ.ಎಂ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.